ನವದೆಹಲಿಯಲ್ಲಿ ಸಿಜೆಪಿ ತಿರಂಗಾ ಯಾತ್ರೆ: 6,000 ಪೊಲೀಸರು ಹಾಗೂ 220 ಸಿಎಪಿಎಫ್ ತುಕಡಿ ನಿಯೋಜನೆ
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಇಂದು (ಶುಕ್ರವಾರ) ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಹಮ್ಮಿಕೊಂಡಿರುವ ತ್ರಿವರ್ಣ ಧ್ವಜ ಹಾರಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೆಹಲಿ ನಗರದೆಲ್ಲೆಡೆ ಭಾರಿ ಪೆ...

ನವದೆಹಲಿಯ ಕನ್ನಾಟ್ ಪ್ಲೇಸ್ನ ಸೆಂಟ್ರಲ್ ಪಾರ್ಕ್ನಲ್ಲಿ ಶುಕ್ರವಾರ ಸಂಜೆ 5 ಗಂಟೆಗೆ ಸಿಜೆಪಿ ಹಮ್ಮಿಕೊಂಡಿರುವ ಧ್ವಜಾರೋಹಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ದೆಹಲಿ ಪೊಲೀಸರ 6,000 ಸಿಬ್ಬಂದಿ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 220 ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ರಾಜೀವ್ ಚೌಕ್, ಜಂತರ್ ಮಂತರ್ ಹಾಗೂ ಸಂಸತ್ ಮಾರ್ಗದಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಹೆಚ್ಚಿನ ನಿಗಾ ವಹಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕವೂ ಕಣ್ಗಾವಲು ಇರಿಸಲಾಗಿದೆ.




