ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ನವದೆಹಲಿಯಲ್ಲಿ ಸೋನಿಯಾ ಗಾಂಧಿ ಟೀಕೆಗೆ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ನಿಮ್ಮ ಇಟಾಲಿಯನ್ ಕನ್ನಡಕವನ್ನು ತೆಗೆದು, ಕಳೆದ 12 ವರ್ಷಗಳಲ್ಲಿ ದೇಶದಲ್ಲಾದ ಅಭಿವೃದ್ಧಿಯನ್ನು ನೋಡಿ ಎಂದು ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿ...

'ನಿಮ್ಮ ಇಟಾಲಿಯನ್ ಕನ್ನಡಕ ತೆಗೆದು ನೋಡಿ': ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು
ಹಂಚಿಕೊಳ್ಳಿ:

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಮಾಡಿರುವ ಆರೋಪಗಳಿಗೆ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ. ಸೋನಿಯಾ ಗಾಂಧಿ ಅವರು ಧರಿಸಿರುವ ಇಟಾಲಿಯನ್ ಕನ್ನಡಕ ತೆಗೆದು ಕಳೆದ 12 ವರ್ಷಗಳಲ್ಲಿ ಭಾರತ ಸಾಧಿಸಿರುವ ಅಭಿವೃದ್ಧಿಯನ್ನು ಗಮನಿಸಬೇಕು ಎಂದು ತರುಣ್ ಚುಗ್ ಸಲಹೆ ನೀಡಿದ್ದಾರೆ. ತುರ್ತು ಪರಿಸ್ಥಿತಿಯನ್ನು ಸಮರ್ಥಿಸಿಕೊಳ್ಳುವ ಮೂಲಕ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಪ್ರದೀಪ್ ಭಂಡಾರಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವು ಜಾತಿ ಮತ್ತು ಧರ್ಮದ ಆಧಾರದಲ್ಲಿ ದೇಶವನ್ನು ವಿಭಜಿಸುವ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಹಂಚಿಕೊಳ್ಳಿ: