ಪಾಕಿಸ್ತಾನ ಬೆಂಬಲದ ಹೇಳಿಕೆ: ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ವಿರುದ್ಧ ಆಕ್ರೋಶ
"ಅಮೆರಿಕ ವಿರುದ್ಧ ಯುದ್ಧವಾದರೆ ಪಾಕಿಸ್ತಾನ ಬೆಂಬಲಿಸುತ್ತೇವೆ" ಎಂಬ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಇದನ್ನು "ಹುಸಿ ರಾಷ್ಟ್...

ಅಮೆರಿಕ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನವನ್ನು ಬೆಂಬಲಿಸುವುದಾಗಿ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋಡ್ ನೀಡಿದ ಹೇಳಿಕೆ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಖಂಡಿಸಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ. ಆದರೆ, ತಾವು ಯುದ್ಧದ ಬಗ್ಗೆ ಮಾತನಾಡುತ್ತಿಲ್ಲ ಬದಲಾಗಿ ಕ್ರೀಡಾ ಸ್ಪರ್ಧೆಯ ಸಂದರ್ಭದಲ್ಲಿ ಕ್ರೀಡಾ ಮನೋಭಾವದಿಂದ ಆ ಮಾತುಗಳನ್ನು ಆಡಿದ್ದೆ ಎಂದು ಮದನ್ ರಾಥೋಡ್ ಸ್ಪಷ್ಟನೆ ನೀಡಿದ್ದಾರೆ. ವಿರೋಧ ಪಕ್ಷಗಳು ರಾಜಕೀಯ ಲಾಭಕ್ಕಾಗಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸುತ್ತಿವೆ ಎಂದು ಅವರು ಆರೋಪಿಸಿದ್ದಾರೆ.




