ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

4 ರಾಜ್ಯಗಳ ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಹೀನಾಯ ಸೋಲಿಗೆ ಪ್ರಧಾನಿ ಮೋದಿ ಲೇವಡಿ

ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಇವಿಎಂಗಳ ಪಾರದರ್ಶಕತೆ ಮತ್ತು ನಂಬಿಕಾರ್ಹತೆಯನ್ನು ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷ ಹಾಗೂ 'ಇಂಡಿಯಾ' ಒಕ್ಕೂಟದ ನಾಯಕರು ಮುಂಬರುವ ಎಲ್ಲ ಚುನಾವಣೆಗಳಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್...

ಬ್ಯಾಲೆಟ್ ಪೇಪರ್ ಬಳಸಿದರೂ ಎಷ್ಟು ಸೀಟು ಗೆದ್ರಪ್ಪ?; ಕಾಂಗ್ರೆಸ್​​ ಹೀನಾಯ ಸೋಲಿಗೆ ಪ್ರಧಾನಿ ಮೋದಿ ಲೇವಡಿ
ಹಂಚಿಕೊಳ್ಳಿ:

ಕರ್ನಾಟಕ, ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದ 28 ವಿಧಾನಪರಿಷತ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೂ ಸ್ಥಾನವನ್ನು ಗೆಲ್ಲಲು ವಿಫಲವಾಗಿದೆ. ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕೆಂದು ಒತ್ತಾಯಿಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ, ಈ ಪದ್ಧತಿಯಲ್ಲಿ ನಡೆದ ಚುನಾವಣೆಯಲ್ಲೂ ಶೂನ್ಯ ಸಾಧನೆ ಮಾಡಿರುವುದು ಮುಜುಗರ ತಂದಿದೆ. ಈ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಎಷ್ಟು ಸ್ಥಾನ ಗೆದ್ದಿದೆ ಎಂದು ಹುಡುಕಲು ಭೂತಗನ್ನಡಿ ಬೇಕೆಂದು ಲೇವಡಿ ಮಾಡಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕೂಡ ಕಾಂಗ್ರೆಸ್ ಪಕ್ಷದ ಈ ಸೋಲನ್ನು ಟೀಕಿಸಿದ್ದು, ಪದೇ ಪದೇ ವ್ಯವಸ್ಥೆಯನ್ನು ದೂಷಿಸುವುದನ್ನು ಬಿಟ್ಟು ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.

ಹಂಚಿಕೊಳ್ಳಿ: