ಸುಲ್ತಾನ್ಪುರ: ಅಮಿತ್ ಶಾ ವಿರುದ್ಧದ ಮಾನನಷ್ಟ ಪ್ರಕರಣದಿಂದ ರಾಹುಲ್ ಗಾಂಧಿ ಮುಕ್ತ
ರಾಹುಲ್ ಗಾಂಧಿಗೆ ಸುಲ್ತಾನ್ಪುರ ವಿಶೇಷ ಎಂಪಿ-ಎಂಎಲ್ಎ ಕೋರ್ಟ್ನಿಂದ ಭಾರೀ ಕಾನೂನು ಗೆಲುವು ಸಿಕ್ಕಿದೆ. ಅಮಿತ್ ಶಾ ವಿರುದ್ಧ 2018ರಲ್ಲಿ ನೀಡಿದ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯನ್ನು ನ್ಯಾಯಾಲಯ ವಜಾಗೊಳಿಸಿ...

ಉತ್ತರ ಪ್ರದೇಶದ ಸುಲ್ತಾನ್ಪುರದಲ್ಲಿರುವ ವಿಶೇಷ ಎಂಪಿ-ಎಂಎಲ್ಎ ನ್ಯಾಯಾಲಯವು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸಿದೆ. 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅಮಿತ್ ಶಾ ಅವರ ಕುರಿತು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ವಿಜಯ್ ಮಿಶ್ರಾ ಈ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೂರಿನಲ್ಲಿ ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಪರಿಗಣಿಸಿ ರಾಹುಲ್ ಗಾಂಧಿ ಅವರನ್ನು ಆರೋಪದಿಂದ ಮುಕ್ತಗೊಳಿಸಿದೆ. ತೀರ್ಪಿನ ವೇಳೆ ರಾಹುಲ್ ಗಾಂಧಿ ಅವರು ನ್ಯಾಯಾಲಯದಲ್ಲಿ ಖುದ್ದು ಹಾಜರಿದ್ದರು.




