ಸುಪ್ರೀಂ ಕೋರ್ಟ್: ಎಸ್‌ಸಿ, ಎಸ್‌ಟಿ ಕ್ಷೇತ್ರಗಳ ರೊಟೇಷನ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ನವದೆಹಲಿ: ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳಿಗೆ (ST) ಮೀಸಲಾಗಿರುವ ಕ್ಷೇತ್ರಗಳನ್ನು ಕಡ್ಡಾಯವಾಗಿ ಸರದಿಯ ಆಧಾರದ ಮೇಲೆ ಬದಲಾಯಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ...

ಉತ್ತರ ಪ್ರದೇಶದ ಕಾದಿಪುರ ವಿಧಾನಸಭಾ ಕ್ಷೇತ್ರವನ್ನು ದಶಕಗಳಿಂದ ಮೀಸಲಾತಿಯಲ್ಲಿ ಇರಿಸಿರುವ ಕ್ರಮವನ್ನು ಪ್ರಶ್ನಿಸಿ ಜಗದೀಶ್ ಸಿಂಗ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠ, ಕ್ಷೇತ್ರಗಳ ಮರುವಿಂಗಡಣೆ ಮತ್ತು ಮೀಸಲಾತಿ ಬದಲಾವಣೆ ಸಂಸತ್ತಿನ ವ್ಯಾಪ್ತಿಗೆ ಬರುವ ವಿಷಯವಾಗಿದ್ದು, ನ್ಯಾಯಾಲಯ ಈ ಕುರಿತು ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳು ಅರ್ಜಿಯನ್ನು ವಜಾಗೊಳಿಸಿದ್ದು, ಕಾನೂನು ತಿದ್ದುಪಡಿಗೆ ಸಂಸತ್ತಿನ ಮೂಲಕ ಪ್ರಯತ್ನಿಸುವಂತೆ ಅಥವಾ ಪ್ರತಿಭಟನೆಗಳ ಹಾದಿ ಹಿಡಿಯುವಂತೆ ಅರ್ಜಿದಾರರಿಗೆ ಸಲಹೆ ನೀಡಿದ್ದಾರೆ.




