ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ದೋಣಿ ಮಗುಚಿ 10 ಎಸ್‌ಡಿಆರ್‌ಎಫ್ ಸಿಬ್ಬಂದಿ ನಾಪತ್ತೆ
ಹೈದರಾಬಾದ್: ಮೀನುಗಾರರನ್ನು ರಕ್ಷಿಸುವ ಕಾರ್ಯಾಚರಣೆ ವೇಳೆ ದೋಣಿಯೊಂದು ಮಗುಚಿಬಿದ್ದ ಪರಿಣಾಮ 10 ಮಂದಿ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿ ನಾಪತ್ತೆಯಾಗಿರುವ ಘಟನೆ ತೆಲಂಗಾಣದ (Telangana) ಖಮ್ಮಂ ಜಿಲ್...

ತೆಲಂಗಾಣದ ಖಮ್ಮಂ ಜಿಲ್ಲೆಯ ಬೇತುಪಲ್ಲಿ ಸರೋವರದಲ್ಲಿ ಮೀನುಗಾರರನ್ನು ರಕ್ಷಿಸಲು ಹೋದ ಎಸ್‌ಡಿಆರ್‌ಎಫ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ದೋಣಿ ಬುಧವಾರ ಸಂಜೆ ಮಗುಚಿ ಬಿದ್ದಿದೆ. ಈ ದುರ್ಘಟನೆಯಲ್ಲಿ 10 ಸಿಬ್ಬಂದಿ ನಾಪತ್ತೆಯಾಗಿದ್ದು, ಜಿಲ್ಲಾಧಿಕಾರಿ ದಿವಾಕರ ಟಿ.ಎಸ್. ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಪತ್ತೆಯಾದವರ ಪತ್ತೆಗಾಗಿ ತೀವ್ರ ಹುಡುಕಾಟ ಆರಂಭಿಸಲಾಗಿದ್ದು, ಸಚಿವರಾದ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಅವರು ರಕ್ಷಣಾ ತಂಡಗಳು ಸಿಬ್ಬಂದಿ ಇರುವ ಸ್ಥಳವನ್ನು ಗುರುತಿಸಿವೆ ಎಂದು ಮಾಹಿತಿ ನೀಡಿದ್ದಾರೆ.




