ಥಾಣೆಯ ತಲಾವ್ ಪಾಲಿಯಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಶಿವಸೇನೆ ಕಾರ್ಯಕರ್ತೆಯರು
ಥಾಣೆ: ಮಹಾರಾಷ್ಟ್ರದ ಥಾಣೆಯ ಜನನಿಬಿಡ 'ತಲಾವ್ ಪಾಲಿ' ಪ್ರದೇಶದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿ ನಡು ರಸ್ತೆಯಲ್ಲೇ ಮಹಿಳೆಯರ ಮೇಲೆ ಶಿವಸೇನೆಯ ಮಹಿಳಾ ಘಟಕದ ಸದಸ್ಯರು ಹಲ್ಲೆ ನಡೆಸಿದ್ದಾರೆ...

ಮಹಾರಾಷ್ಟ್ರದ ಥಾಣೆಯ ತಲಾವ್ ಪಾಲಿ ಪ್ರದೇಶದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ಶಿವಸೇನೆಯ ಮಹಿಳಾ ಘಟಕದ ಸದಸ್ಯರು ಕೆಲವು ಮಹಿಳೆಯರ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ. ಆರೋಪಿಗಳು ಹಲ್ಲೆ ನಡೆಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವೇಳೆ ಮಹಿಳೆಯರನ್ನು ಥಳಿಸಿ ಕೂದಲನ್ನು ಎಳೆದಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಪೊಲೀಸರಿಗೆ ಪದೇ ಪದೇ ದೂರು ನೀಡಿದರೂ ಯಾವುದೇ ಪ್ರಯೋಜನವಾಗದ ಕಾರಣ ತಾವು ಈ ಕ್ರಮ ಕೈಗೊಂಡಿರುವುದಾಗಿ ಶಿವಸೇನೆ ಕಾರ್ಯಕರ್ತೆಯರು ಸಮರ್ಥನೆ ನೀಡಿದ್ದಾರೆ. ಸ್ಥಳೀಯರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಈ ಘಟನೆ ನಡೆದಿದೆ ಎಂದು ಸಂಘಟನೆಯ ಸದಸ್ಯರು ತಿಳಿಸಿದ್ದಾರೆ.




