ಉಜ್ಜಯಿನಿಯ ರಾಮಘಾಟ್‌ನಲ್ಲಿ ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಪೂಜೆ
ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಹಿಂದೂ ಧಾರ್ಮಿಕ ಮತಾಂತರದ ಬಗ್ಗೆ ಚರ್ಚೆ ನಡೆಯುತ್ತಿದೆ. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ರಾಮ್‌ಘಾಟ್‌ನಲ್ಲಿ ಅವರು ಪೂಜೆ ಸಲ್ಲಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ....

ಸುಪ್ರೀಂ ಕೋರ್ಟ್ ವಕೀಲೆ ನಾಜಿಯಾ ಇಲಾಹಿ ಖಾನ್ ಅವರು ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ರಾಮಘಾಟ್‌ನಲ್ಲಿ ಹಿಂದೂ ಸಂಪ್ರದಾಯದಂತೆ ಪೂಜೆ ಸಲ್ಲಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಕ್ಟೋಬರ್ 10ರಂದು ಸರ್ವ ಪಿತೃ ಅಮವಾಸ್ಯೆಯ ದಿನದಂದು ಅವರು ತಮ್ಮ ಪೂರ್ವಜರಿಗೆ ತರ್ಪಣ ಮತ್ತು ಪಿಂಡ ದಾನ ನೆರವೇರಿಸಿದ್ದಾರೆ. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅವರು ಸನಾತನ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಲೋನಿಯ ಬಿಜೆಪಿ ಶಾಸಕ ನಂದಕಿಶೋರ್ ಗುರ್ಜರ್ ಅವರನ್ನು ತಂದೆಯ ಸ್ಥಾನದಲ್ಲಿ ಗೌರವಿಸಿರುವ ನಾಜಿಯಾ, ಅವರಿಂದ ಗೋತ್ರವನ್ನು ಸ್ವೀಕರಿಸಿದ್ದಾರೆ ಎಂದು ವರದಿಯಾಗಿದೆ.




