ಉಖ್ರುಲ್ ಜಿಲ್ಲೆಯಲ್ಲಿ ಶಂಕಿತ ಉಗ್ರರ ಗುಂಡಿನ ದಾಳಿ: ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಸಾವು
ಉಖ್ರುಲ್: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಶುಕ್ರವಾರ ಶಂಕಿತ ಉಗ್ರರು ಎರಡು ಕಾರುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಗುಂಡಿನ ದಾಳಿಯು ಇಂಫಾಲ...

ಮಣಿಪುರದ ಉಖ್ರುಲ್ ಜಿಲ್ಲೆಯ ಇಂಫಾಲ-ಉಖ್ರುಲ್ ರಸ್ತೆಯ ನ್ಯೂ ಹೆವನ್ ಬಳಿ ಶಂಕಿತ ಉಗ್ರರು ಎರಡು ಕಾರುಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದುರ್ಘಟನೆಯಲ್ಲಿ ಎರಡು ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಾಹನಗಳ ಮುಂಭಾಗದ ಗಾಜಿನ ಮೇಲೆ ಗುಂಡಿನ ಗುರುತುಗಳು ಪತ್ತೆಯಾಗಿವೆ. ಇದಕ್ಕೂ ಮುನ್ನ ನಡೆದ ಮತ್ತೊಂದು ಘಟನೆಯಲ್ಲಿ, ಕಾಂಗ್‌ಪೋಕ್‌ಪಿ ಮತ್ತು ಸೇನಾಪತಿ ಜಿಲ್ಲೆಯ ಗಡಿಭಾಗದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡಿದ್ದರು.




