ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಉತ್ತರ ದಿನಾಜ್‌ಪುರ: ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಪೊಲೀಸರ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಸೋಮವಾರ ಮುಂಜಾನೆ ಉತ್ತರ ದಿನಾಜ್‌ಪುರ ಜಿಲ್...

12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ; ಆರೋಪಿ ಪೊಲೀಸ್ ಎನ್ಕೌಂಟರ್ ನಲ್ಲಿ ಹತ!
ಹಂಚಿಕೊಳ್ಳಿ:

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ರಾಯ್‌ಗಂಜ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಎಸಗಿದ ಆರೋಪ ಹೊತ್ತಿದ್ದ ದಿಲೀಪ್ ರಾಯ್ ಎಂಬಾತನನ್ನು ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಸೋಮವಾರ ಮುಂಜಾನೆ ಬಿಹಾರ ಗಡಿಯ ಸಮೀಪದ ಪರಪುಕುರ್ ಪ್ರದೇಶದಲ್ಲಿ ಅಡಗಿದ್ದ ಆರೋಪಿಯನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಆತ್ಮರಕ್ಷಣೆಗೆ ಮುಂದಾದ ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಗಾಯಗೊಂಡ ದಿಲೀಪ್ ರಾಯ್, ರಾಯ್‌ಗಂಜ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ನವೆಂಬರ್ 3 ರಂದು ನಾಪತ್ತೆಯಾಗಿದ್ದ 12 ವರ್ಷದ ಬಾಲಕಿಯ ಮೃತದೇಹ ಕುಲಿಕ್ ನದಿಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿತ್ತು.

ಹಂಚಿಕೊಳ್ಳಿ: