ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ಉತ್ತರ ಪ್ರದೇಶ ಎಂಎಲ್‌ಸಿ ಚುನಾವಣೆ: 6 ಕ್ಷೇತ್ರಗಳಲ್ಲಿ ಬಿಜೆಪಿ ಜಯ, ವಾರಣಾಸಿಯಲ್ಲಿ ಎಸ್‌ಪಿ ಗೆಲುವು

ಲಖನೌ: ಉತ್ತರ ಪ್ರದೇಶದ 11 ವಿಧಾನ ಪರಿಷತ್ (ಎಂಎಲ್‌ಸಿ) ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 6 ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಸಮಾಜವಾದಿ ಪಾರ್ಟಿ (ಎಸ್‌ಪಿ) 3 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದೆ.ಮತ ಎಣಿಕ...

MLC ಚುನಾವಣೆ: ಯೋಗಿ ಭದ್ರಕೋಟೆಯಲ್ಲಿ ಬಿಜೆಪಿಗೆ ಜಯ, ಮೋದಿ ಕ್ಷೇತ್ರದಲ್ಲಿ ಸೋಲು
ಹಂಚಿಕೊಳ್ಳಿ:

ಉತ್ತರ ಪ್ರದೇಶದ 11 ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 6 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತವರು ಕ್ಷೇತ್ರವಾದ ಗೋರಖ್‌ಪುರದಲ್ಲಿ ಧ್ರುವ ತ್ರಿಪಾಠಿ ಜಯಗಳಿಸಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸಮಾಜವಾದಿ ಪಾರ್ಟಿಯ ಲಾಲ್ ಬಹದ್ದೂರ್ ಯಾದವ್ ಗೆಲುವು ಸಾಧಿಸಿದ್ದಾರೆ. ಸದ್ಯ ಎಸ್‌ಪಿ 3 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದ್ದು, ಇನ್ನೂ 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಫಲಿತಾಂಶದ ಕುರಿತು ಅಖಿಲೇಶ್ ಯಾದವ್ ಮತ್ತು ಕೇಶವ್ ಪ್ರಸಾದ್ ಮೌರ್ಯ ಭಿನ್ನ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಹಂಚಿಕೊಳ್ಳಿ: