ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಭಾರತ

ವರ್ಧಾ: ತಳೇಗಾಂವ್ ಶ್ಯಾಮಜಿ ಪಂತ್ ಆರೋಗ್ಯ ಕೇಂದ್ರದಲ್ಲಿ ವೈದ್ಯೆಯ ಮೇಲೆ ಆರೋಪಿಯ ಹಲ್ಲೆ

ವರ್ಧಾ: ಮಹಾರಾಷ್ಟ್ರದ ವರ್ಧಾ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೊಲೀಸರ ಸಮ್ಮುಖದಲ್ಲೇ ಆರೋಪಿ ಮಹಿಳಾ ವೈದ್ಯಾಧಿಕಾರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಿಸಿಟಿವಿ ದೃಶ್ಯಾವಳಿ ವೈ...

ಶಾಕಿಂಗ್ ವಿಡಿಯೊ: ವೈದ್ಯಕೀಯ ತಪಾಸಣೆಗೆ ಕರೆತಂದ ಆರೋಪಿಯಿಂದ ವೈದ್ಯೆಗೆ ಕಪಾಳಮೋಕ್ಷ ; ವ್ಯಾಪಕ ಖಂಡನೆ
ಹಂಚಿಕೊಳ್ಳಿ:

ಮಹಾರಾಷ್ಟ್ರದ ವರ್ಧಾ ಜಿಲ್ಲೆಯ ತಳೇಗಾಂವ್ ಶ್ಯಾಮಜಿ ಪಂತ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯನಿರತ ವೈದ್ಯಾಧಿಕಾರಿ ಡಾ. ಶ್ರದ್ಧಾ ಭುಮ್ರೆ ಅವರ ಮೇಲೆ ಕಾದಿರ್ ಅಲಿ ರಜಾಕ್ ಅಲಿ ಎಂಬ ಆರೋಪಿ ಹಲ್ಲೆ ನಡೆಸಿದ್ದಾನೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ವೈದ್ಯಕೀಯ ತಪಾಸಣೆಗೆಂದು ಪೊಲೀಸರು ಆತನನ್ನು ಕರೆತಂದಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯ ಈ ವರ್ತನೆಯಿಂದ ಆಕ್ರೋಶಗೊಂಡಿರುವ ಸರ್ಕಾರಿ ವೈದ್ಯರ ಸಂಘ, ಕರ್ತವ್ಯಲೋಪವೆಸಗಿದ ಐವರು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಹೊರರೋಗಿ ವಿಭಾಗದ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಹಂಚಿಕೊಳ್ಳಿ: