ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ದ್ವಂದ್ವ ನೀತಿಯನ್ನು ತರಾಟೆಗೆ ತೆಗೆದುಕೊಂಡ ಭಾರತ
ನವದೆಹಲಿ: ಗಡಿಯಾಚೆಗಿನ ಭಯೋತ್ಪಾದನೆಗೆ ನಿರಂತರ ಕುಮ್ಮಕ್ಕು ನೀಡುತ್ತಾ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಮಾನವ ಹಕ್ಕುಗಳು ಮತ್ತು ಧಾರ್ಮಿಕ ಸ್ವಾತಂತ್ರ್ಯದ ಮಾತನಾಡುತ್ತಿರುವ ಪಾಕಿಸ್ತಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ತ...

ವಿಶ್ವಸಂಸ್ಥೆಯಲ್ಲಿ ನಡೆದ ಸಂವಾದದ ವೇಳೆ ಭಾರತದ ಪ್ರಥಮ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಅವರು ಪಾಕಿಸ್ತಾನದ ಇಬ್ಬಗೆಯ ನೀತಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. 1999ರ ಕಾರ್ಗಿಲ್ ಯುದ್ಧದಲ್ಲಿ ಮೃತಪಟ್ಟ ತಮ್ಮ ಸೈನಿಕರ ಶವಗಳನ್ನು ಸ್ವೀಕರಿಸಲು ನಿರಾಕರಿಸಿದ್ದ ಪಾಕಿಸ್ತಾನಕ್ಕೆ, ಧಾರ್ಮಿಕ ಹಕ್ಕುಗಳ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಅಂದು ಭಾರತೀಯ ಸೇನೆಯು ಪಾಕ್ ಯೋಧರಿಗೆ ಗೌರವಪೂರ್ವಕವಾಗಿ ಅಂತ್ಯಕ್ರಿಯೆ ನೆರವೇರಿಸಿದ್ದನ್ನು ಈ ಸಂದರ್ಭದಲ್ಲಿ ನೆನಪಿಸಲಾಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ಉಲ್ಲಂಘನೆ ಮತ್ತು ಅವರ ಸಂಖ್ಯೆ ಕುಸಿಯುತ್ತಿರುವ ಬಗ್ಗೆಯೂ ಭಾರತ ಗಂಭೀರ ಆಕ್ಷೇಪ ವ್ಯಕ್ತಪಡಿಸಿದೆ.




