‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್ ಗಾಂಧಿ ಬೆಂಬಲ
ನವದೆಹಲಿ: ಶಾಂತಿಯುತ ಪ್ರತಿಭಟನೆ ವೇಳೆ ತ್ರಿವರ್ಣ ಧ್ವಜ ಪ್ರದರ್ಶಿಸಿದ ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನದ ಕೃತ್ಯ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯ ಜ...

ದೆಹಲಿಯ ಜಂತರ್ ಮಂತರ್ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಾರ್ಟಿಯ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರಿಗೆ ಐದು ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅನುಮತಿ ಇಲ್ಲದೆ ಪ್ರತಿಭಟಿಸಿದ ಆರೋಪದ ಮೇಲೆ ಇವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದ್ದು, ಈ ಕ್ರಮವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಡಿತನದ ಕೆಲಸ ಎಂದು ಟೀಕಿಸಿದ್ದಾರೆ. ರಾಷ್ಟ್ರಧ್ವಜ ಹಿಡಿದು ಪ್ರತಿಭಟಿಸುವುದು ಅಪರಾಧವಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಮತ್ತೊಂದೆಡೆ, ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ರ್ಯಾಲಿ ನಡೆಸಲು ವಿಪಕ್ಷಗಳು ನಿರ್ಧರಿಸಿವೆ.




