ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು ಸಹಿತ ಭರ್ಜರಿ ಮಳೆ
Karnataka weather forecast today: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಾಣಿ-ಮೈಸೂರು ಹೆದ್ದಾರಿಗೆ ನೀರು ನುಗ್ಗಿ ವಾಹನ ಸವಾರರು ಪರದಾಡುವಂತಾಯಿತು. ಅಕ್ಟೋಬರ್ 24ರವರೆಗೆ...

ದಕ್ಷಿಣ ಕನ್ನಡದ ಮಂಗಳೂರು, ಕಡಬ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ಭಾಗಗಳಲ್ಲಿ ಗುರುವಾರ ಸಂಜೆ ಗಾಳಿ ಹಾಗೂ ಗುಡುಗಿನೊಂದಿಗೆ ಉತ್ತಮ ಮಳೆಯಾಗಿದೆ. ಸುಳ್ಯದ ಬೊಳುಬೈಲು ಬಳಿ ಮಾಣಿ-ಮೈಸೂರು ಹೆದ್ದಾರಿಗೆ ಮಳೆ ನೀರು ನುಗ್ಗಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ದೀರ್ಘಕಾಲದ ಬಿಸಿಲಿನ ನಂತರ ಉಡುಪಿ ಜಿಲ್ಲೆಯಲ್ಲೂ ಮಳೆ ಸುರಿದಿದೆ. ಅಕ್ಟೋಬರ್ 24ರವರೆಗೆ ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದ್ದು, ಇಂದು ಸಮುದ್ರ ತೀರದಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




