ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 3 ಗಂಟೆ ಭಾರಿ ಮಳೆ: ಎಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಎಲ್ಲೋ ಅಲರ್...

ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯು ಎಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಭಾಗಗಳಲ್ಲಿ ಗುಡುಗು ಸಹಿತ ಜೋರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಈ ವೇಳೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಮಳೆಯ ಆರ್ಭಟದ ವೇಳೆ ಮರಗಳು ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯದಂತೆ ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ.




