ಮಂಗಳೂರು: ಲೂಟಿ ಮಾಡಿದ ಇಬ್ಬರು ಪೊಲೀಸ್ ಸಿಬ್ಬಂದಿ ಬಂಧನ
ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇದು. ಹೊಯ್ಸಳ ವಾಹನದಲ್ಲಿ ಲೂಟಿಗಿಳಿದಿದ್ದ ಇಬ್ಬರು ಪೊಲೀಸರು ಅರೆಸ್ಟ್ ಮಾಡಲಾಗಿದೆ. ಮಂಗಳೂರಿನ ದಕ್ಷಿಣ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನ ಸ್ವತಃ ಪೊಲೀಸ್ ಕಮಿಷನರ್ ಅವ...

ಮಂಗಳೂರಿನಲ್ಲಿ ಹೊಯ್ಸಳ ವಾಹನದಲ್ಲಿದ್ದ ಶಿವರಾಜ್ ಮತ್ತು ಹಿರಣ್ಣ ಬೆನ್ನಿ ಎಂಬ ಇಬ್ಬರು ಪೊಲೀಸ್ ಸಿಬ್ಬಂದಿ ರವಿರಾಜ್ ಎಂಬುವವರನ್ನು ತಡೆದು ಹಲ್ಲೆ ನಡೆಸಿದ್ದಾರೆ. ಇವರು ರವಿರಾಜ್ ಅವರಿಂದ ನಗದು, ಎಟಿಎಂ ಕಾರ್ಡ್ ಹಾಗೂ ಮೊಬೈಲ್ ದೋಚಿದ್ದಲ್ಲದೆ ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರ ಸೂಚನೆಯ ಮೇರೆಗೆ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮಾನಾಥ್ ಎಂಬ ಮತ್ತೊಬ್ಬ ಸಿಬ್ಬಂದಿಯ ವಿರುದ್ಧವೂ ತನಿಖೆ ನಡೆಯುತ್ತಿದೆ.




