ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರಾವಳಿ

ಮಂಗಳೂರು: ರೈಲುಗಳ ವೇಳಾಪಟ್ಟಿ ಬದಲಾವಣೆ ಕೈಬಿಡಲು ಸಚಿವ ವಿ.ಸೋಮಣ್ಣಗೆ ಶಾಸಕ ಕಾಮತ್ ಮನವಿ

ಮಂಗಳೂರು-ಯಶವಂತಪುರ ನಡುವಿನ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ಸೇರಿದಂತೆ ಎರಡು ಪ್ರಮುಖ ರೈಲುಗಳ ವೇಳಾಪಟ್ಟಿ ಬದಲಾವಣೆಗೆ ವಿರೋಧ ವ್ಯಕ್ತವಾಗಿದೆ. ಹಳೆಯ ಬೆಳಗ್ಗೆ 7 ಗಂಟೆಯ ನಿರ್ಗಮನ ಸಮಯವನ್ನೇ ಮುಂದುವರಿಸುವಂತೆ ಶಾಸಕ ವೇದವ್...

· ದಕ್ಷಿಣ ಕನ್ನಡ
ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲಾವಣೆ, ಗೋಮಟೇಶ್ವರ, ಯಶವಂತಪುರ ಎಕ್ಸ್‌ಪ್ರೆಸ್‌ಗಳ ಸಮಯ ಬದಲಿಸದಂತೆ ಮನವಿ
ಹಂಚಿಕೊಳ್ಳಿ:

ಮಂಗಳೂರು ಜಂಕ್ಷನ್‌ನಿಂದ ಯಶವಂತಪುರಕ್ಕೆ ಸಂಚರಿಸುವ ಗೊಮ್ಮಟೇಶ್ವರ ಮತ್ತು ಮತ್ತೊಂದು ಎಕ್ಸ್‌ಪ್ರೆಸ್ ರೈಲುಗಳ ನಿರ್ಗಮನ ಸಮಯವನ್ನು ಬದಲಾಯಿಸುವ ರೈಲ್ವೆ ಇಲಾಖೆಯ ನಿರ್ಧಾರಕ್ಕೆ ಪ್ರಯಾಣಿಕರಿಂದ ವಿರೋಧ ವ್ಯಕ್ತವಾಗಿದೆ. ಪ್ರಸ್ತುತ ಬೆಳಗ್ಗೆ 7 ಗಂಟೆಗೆ ಹೊರಡುವ ರೈಲುಗಳು ಸಂಜೆ 4.30ಕ್ಕೆ ತಲುಪುತ್ತಿದ್ದು, ಹೊಸ ವೇಳಾಪಟ್ಟಿಯಂತೆ ಇವು ರಾತ್ರಿ 10.15ಕ್ಕೆ ತಲುಪಲಿವೆ. ಇದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಮತ್ತು ಭಕ್ತಾದಿಗಳಿಗೆ ತೊಂದರೆಯಾಗಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ರೈಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ಪತ್ರ ಬರೆದು ಹಳೆಯ ಸಮಯವನ್ನೇ ಮುಂದುವರಿಸುವಂತೆ ಕೋರಿದ್ದಾರೆ.

ಹಂಚಿಕೊಳ್ಳಿ: