ಉಡುಪಿ ನಗರದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಓರ್ವ ವ್ಯಕ್ತಿ ಬಂಧನ, ಎಂಡಿಎಂಎ ಸೇರಿದಂತೆ ಮಾದಕ ವಸ್ತುಗಳು ಹಾಗೂ ಸ್ಕೂಟರ್ ವಶ
ಉಡುಪಿ ನಗರ ಪೊಲೀಸ್ ಠಾಣ ಪೋಲೀಸರ ಕಾರ್ಯಾಚರಣೆ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ

ಉಡುಪಿ: ನಗರದ ಅಜ್ಜರಕಾಡು ಭುಜಂಗ ಪಾರ್ಕ್‌ನ ದಕ್ಷಿಣ ಭಾಗದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ವಿಜಯ್ ಅಲಿಯಾಸ್ ವಿಜಯ್ ಪೂಜಾರಿ (36), ಪಿತ್ರೋಡಿ, ಉದ್ಯಾವರ ನಿವಾಸಿಯನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಅ.17ರಂದು ಉಡುಪಿ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಅವರಿಗೆ ದೊರೆತ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು. ಈ ವೇಳೆ ಆರೋಪಿಯ ಸ್ಕೂಟರ್‌ನ ಡಿಕ್ಕಿಯಲ್ಲಿ 17.66 ಗ್ರಾಂ ತೂಕದ ಆಂಫೆಟಮೈನ್/ಮೆಥಾಂಫೆಟಮೈನ್ ಮಾದಕ ವಸ್ತುಗಳು ಪತ್ತೆಯಾಗಿದ್ದು, ಇವುಗಳ ಅಂದಾಜು ಮೌಲ್ಯ ₹35 ಸಾವಿರ ಎಂದು ತಿಳಿಸಲಾಗಿದೆ. ಅಲ್ಲದೆ, 2.18 ಗ್ರಾಂ ತೂಕದ ಮಾತ್ರೆ ಮತ್ತು ಪೌಡರ್, ತೂಕದ ಯಂತ್ರ, 7 ಖಾಲಿ ಜಿಪ್ ಕವರ್‌ಗಳು, ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 141/2026ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c), 22(b) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.




