ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರಾವಳಿ

ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲಿಗೆ ಸುಬ್ರಹ್ಮಣ್ಯ ರೋಡ್‌ವರೆಗೆ ವಿದ್ಯುತ್ ಎಂಜಿನ್ ಅಳವಡಿಕೆ

ಯಶವಂತಪುರ–ಕಾರವಾರ ಎಕ್ಸ್‌ಪ್ರೆಸ್ ರೈಲು ಮೊದಲ ಬಾರಿಗೆ ಸುಬ್ರಹ್ಮಣ್ಯ ರೋಡ್‌ವರೆಗೆ ವಿದ್ಯುತ್ ಎಂಜಿನ್‌ನೊಂದಿಗೆ ಸಂಚರಿಸಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಯಶವಂತಪುರ-ಮಡಗಾಂವ್ ನಡುವೆ ಮಂಗಳೂರು ಜಂಕ್ಷನ್ ಮೂಲಕ ವಿಶೇಷ ರೈಲ...

· ದಕ್ಷಿಣ ಕನ್ನಡ
ಕರಾವಳಿ ರೈಲು ಪ್ರಯಾಣಿಕರಿಗೆ ಕಾದಿದೆ ಒಂದು ಅಚ್ಚರಿಯ ಸುದ್ದಿ, ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ಅಪ್‌ಗ್ರೇಡ್!
ಹಂಚಿಕೊಳ್ಳಿ:

ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್ ರೈಲು ಇದೇ ಮೊದಲ ಬಾರಿಗೆ ವಿದ್ಯುತ್ ಎಂಜಿನ್ ಬಳಸಿ ಸುಬ್ರಹ್ಮಣ್ಯ ರೋಡ್ ನಿಲ್ದಾಣದವರೆಗೆ ಸಂಚರಿಸಿದೆ. ಈ ರೈಲು ಕಾರ್ಯಾಚರಣೆಯಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೆಜೆಎಂ ಮೂಲದ ಡಬ್ಲ್ಯುಎಜಿ-9 ಎಚ್‌ಸಿ ಎಂಜಿನ್‌ಗಳನ್ನು ಬಳಸಲಾಗಿದೆ. ಇನ್ನು ದೀಪಾವಳಿ ಹಬ್ಬದ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈಋತ್ಯ ರೈಲ್ವೆಯು ಯಶವಂತಪುರ-ಮಡಗಾಂವ್ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ಮನವಿಯ ಮೇರೆಗೆ ಮಂಗಳೂರು ಜಂಕ್ಷನ್ ಮೂಲಕ ಈ ವಿಶೇಷ ರೈಲು ಸಂಚಾರಕ್ಕೆ ಅನುಮೋದನೆ ದೊರೆತಿದೆ.

ಹಂಚಿಕೊಳ್ಳಿ: