ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರಾವಳಿ

ಯಶವಂತಪುರ-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಅಧಿಕೃತ ಅನುಮೋದನೆ

ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲನ್ನು ಯಶವಂತಪುರದವರೆಗೆ ವಿಸ್ತರಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಇದರಿಂದ ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳ ನಡುವಿನ ಹಗಲು ಹೊತ್ತಿನ ಪ್ರಯಾಣದ ಸಮಯ ಭಾರೀ ಉಳಿತಾಯವಾಗಲಿದೆ....

· ಉಡುಪಿ
ಪಂಚಗಂಗಾದಂತೆ ಕರಾವಳಿಗೆ ಬೆಳಗ್ಗೆ ಟ್ರೇನ್‌: ಬೆಂಗಳೂರು-ಮಡಗಾಂವ್‌ ವಂದೇ ಭಾರತ್‌ನಲ್ಲಿ ಸಮಯ ಉಳಿತಾಯ, ಜಸ್ಟ್‌ 13 ಗಂಟೆ ಪ್ರಯಾಣ!
ಹಂಚಿಕೊಳ್ಳಿ:

ಬೆಂಗಳೂರಿನಿಂದ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಯಶವಂತಪುರ-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ಹೊಸ ರೈಲು ಸೇವೆ ವಾರದಲ್ಲಿ ಆರು ದಿನ ಸಂಚರಿಸಲಿದ್ದು, ನವೆಂಬರ್ ಮೂರನೇ ವಾರದೊಳಗೆ ಉದ್ಘಾಟನೆಗೊಳ್ಳಲಿದೆ. ಈ ರೈಲು ಶ್ರವಣಬೆಳಗೊಳ, ಹಾಸನ, ಮಂಗಳೂರು ಜಂಕ್ಷನ್, ಉಡುಪಿ ಹಾಗೂ ಕಾರವಾರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಯತ್ನದಿಂದ ಈ ಯೋಜನೆ ಸಾಕಾರಗೊಂಡಿದೆ.

ಹಂಚಿಕೊಳ್ಳಿ: