ಅಫಜಲಪುರ: ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಡಾ. ಸಿ.ವಿ. ಟಕ್ಕಳಕಿ ನಿಧನ
ಅಫಜಲಪುರ: ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಡಾ. ಸಿ ವಿ. ಟಕ್ಕಳಕಿ (80) ಅವರು ಶುಕ್ರವಾರ ಸಾಯಂಕಾಲ ಮನೆಯಲ್ಲಿ ನಿಧನರಾದರು.

ಅಫಜಲಪುರದ ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿಯಾಗಿದ್ದ ಡಾ. ಸಿ.ವಿ. ಟಕ್ಕಳಕಿ ಅವರು ತಮ್ಮ 80ನೇ ವಯಸ್ಸಿನಲ್ಲಿ ಶುಕ್ರವಾರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಇವರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಮೃತರಿಗೆ ಓರ್ವ ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ. ಶನಿವಾರ ಮಧ್ಯಾಹ್ನ ಅಳ್ಳಗಿ ಬಿ. ರಸ್ತೆಯಲ್ಲಿರುವ ಅವರ ಸ್ವಂತ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ನಿವೃತ್ತಿಯ ನಂತರವೂ ವೈದ್ಯಕೀಯ ವೃತ್ತಿಯನ್ನು ಮುಂದುವರಿಸಿದ್ದ ಇವರು, ಬಸವ ಬಳಗದ ಮೂಲಕ ವಚನ ಪ್ರಸಾರ ಹಾಗೂ ಮಹಾ ಮನೆ ಕಾರ್ಯಕ್ರಮಗಳಲ್ಲಿ ಸಕ್ರಿಯರಾಗಿದ್ದರು.




