ಬಾಗಲಕೋಟೆ ಹಾಸ್ಟೆಲ್‌ನಲ್ಲಿ ಮೂಲಸೌಕರ್ಯ ಕೊರತೆ: ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿನಿಯರ ಆಕ್ರೋಶ
ಬಾಗಲಕೋಟೆ: ನಗರದ ನವನಗರದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ನಲ್ಲಿ (Hostel) ಮೂಲಸೌಕರ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿನಿಯರು ತೀವ್ರ ಪರದಾಟ ಅನುಭವಿಸುತ್ತಿದ್ದಾರೆ....

ಬಾಗಲಕೋಟೆಯ ನವನಗರದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೊಠಡಿಗಳಲ್ಲಿ ಫ್ಯಾನ್ ಇಲ್ಲದ ಕಾರಣ ಸೊಳ್ಳೆಗಳ ಕಾಟ ಮತ್ತು ಸೆಕೆಯಿಂದಾಗಿ ನಿದ್ದೆಯಿಲ್ಲದೆ ರಾತ್ರಿ ಕಳೆಯುವಂತಾಗಿದೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ. ಶೌಚಾಲಯಗಳ ಬಾಗಿಲು ಮುರಿದಿದ್ದು, ಸ್ನಾನಗೃಹಗಳಿಗೆ ನೀರಿನ ವ್ಯವಸ್ಥೆಯೂ ಇಲ್ಲದಾಗಿದೆ. ಈ ಸಮಸ್ಯೆಗಳ ಬಗ್ಗೆ ವಾರ್ಡನ್ ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿರುವ ವಿದ್ಯಾರ್ಥಿನಿಯರು, ಕೂಡಲೇ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿದ್ದಾರೆ.




