ಬಳ್ಳಾರಿ ಜಿಲ್ಲೆಯಲ್ಲಿ ತೀವ್ರಗೊಂಡ ಅಂತರ್ಜಲ ಕುಸಿತ: ಸಂಡೂರಿನಲ್ಲಿ 8.26 ಮೀಟರ್ ಇಳಿಕೆ
ಬಳ್ಳಾರಿ: ಜಿಲ್ಲೆಯಾದ್ಯಂತ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ಮತ್ತಷ್ಟು ತೊಂದರೆಯಾಗುವ, ಭೂಮಿಯ ಒಳಗಿನ ನೀರಿನ ಮೇಲೆ ಮತ್ತಷ್ಟು ಅವಲಂಬನೆ ಹ...

ಬಳ್ಳಾರಿ ಜಿಲ್ಲೆಯಾದ್ಯಂತ ಅಂತರ್ಜಲ ಮಟ್ಟವು ಗಣನೀಯವಾಗಿ ಕುಸಿಯುತ್ತಿದ್ದು, ಇದು ಕುಡಿಯುವ ನೀರು ಮತ್ತು ಕೃಷಿ ಕ್ಷೇತ್ರಕ್ಕೆ ದೊಡ್ಡ ಸಂಕಷ್ಟವನ್ನು ತಂದೊಡ್ಡಿದೆ. ವಿಶೇಷವಾಗಿ ಸಂಡೂರು ತಾಲೂಕಿನಲ್ಲಿ ಕಳೆದ ಒಂದು ವರ್ಷದಲ್ಲಿ 8.26 ಮೀಟರ್ಗಳಷ್ಟು ಅಂತರ್ಜಲ ಮಟ್ಟ ಕುಸಿದಿದ್ದು, ಇದು ಜಿಲ್ಲೆಯಲ್ಲೇ ಅತಿ ಹೆಚ್ಚು ಇಳಿಕೆಯಾಗಿದೆ. ಕಂಪ್ಲಿ, ಬಳ್ಳಾರಿ, ಕುರುಗೋಡು ಮತ್ತು ಸಿರುಗುಪ್ಪ ತಾಲೂಕುಗಳಲ್ಲೂ ಅಂತರ್ಜಲ ಮಟ್ಟ ತೀವ್ರವಾಗಿ ತಗ್ಗಿರುವುದರಿಂದ ಕೊಳವೆಬಾವಿಗಳ ಮೇಲಿನ ಅವಲಂಬನೆ ಹೆಚ್ಚಾಗಿದೆ. ಸಂಡೂರಿನ ಹಳೆ ವದ್ದಿನಕಟ್ಟೆ, ಎಚ್.ಕೆ.ಹಳ್ಳಿ ಹಾಗೂ ಬಳ್ಳಾರಿಯ ಹೊನ್ನಾಳ್ಳಿ ತಾಂಡಾದಂತಹ ಪ್ರದೇಶಗಳಲ್ಲಿ ಈಗಾಗಲೇ ಟ್ಯಾಂಕರ್ಗಳ ಮೂಲಕ ನೀರು ಪೂರೈಸುವ ಸ್ಥಿತಿ ನಿರ್ಮಾಣವಾಗಿದೆ.




