ಬೀದರ್: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿರುಸಿನ ಮತದಾನ ಆರಂಭ
ಬೀದರ್: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜಿಲ್ಲೆಯಾದ್ಯಂತ ಶುಕ್ರವಾರ ಬಿರುಸಿನ ಮತದಾನ ನಡೆಯುತ್ತಿದೆ.ಜಿಲ್ಲೆಯ ಒಟ್ಟು 33 ಮತಗಟ್ಟೆಗಳಲ್ಲಿ ಮತದಾನ ಪ್ರಗತಿಯಲ್ಲಿದೆ. ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲ...

ಬೀದರ್ ಜಿಲ್ಲೆಯಾದ್ಯಂತ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾನ ಪ್ರಕ್ರಿಯೆ ಶುಕ್ರವಾರ ಭರದಿಂದ ಸಾಗಿದೆ. ಜಿಲ್ಲೆಯ 33 ಕೇಂದ್ರಗಳಲ್ಲಿ ಒಟ್ಟು 7,038 ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಮಧ್ಯಾಹ್ನ 12 ಗಂಟೆಯವರೆಗೆ ಶೇ 39ರಷ್ಟು ಮತದಾನ ದಾಖಲಾಗಿದೆ. ಬಿಜೆಪಿಯ ಶಶೀಲ್ ನಮೋಶಿ ಹಾಗೂ ಕಾಂಗ್ರೆಸ್ನ ಶರಣಪ್ಪ ಮಟ್ಟೂರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ನಗರ ಮತ್ತು ಗ್ರಾಮೀಣ ಭಾಗದ ಮತಗಟ್ಟೆಗಳಲ್ಲಿ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರೆ, ರಾಜಕೀಯ ಮುಖಂಡರು ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿದ್ದಾರೆ.




