ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತರ ಪ್ರತಿಭಟನೆ: ಕಬ್ಬಿಗೆ ಲಾಭದಾಯಕ ಬೆಲೆಗೆ ಆಗ್ರಹ
ಬೆಳಗಾವಿ: ಕಬ್ಬಿಗೆ ಲಾಭದಾಯಕ ಬೆಲೆ ನೀಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ ನೇತೃತ್ವ) ಇನ್ನೊಂದು ಬಣದ ಕಾರ್ಯಕರ್ತರು ನಗರದ...

ಬೆಳಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದರು. 2026-27ನೇ ಸಾಲಿನ ಕಬ್ಬಿನ ಬೆಳೆಗೆ ಲಾಭದಾಯಕ ಬೆಲೆ ನಿಗದಿಪಡಿಸಬೇಕು ಹಾಗೂ ಸರ್ಕಾರಗಳು ಸೂಕ್ತ ಸಹಾಯಧನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇದರೊಂದಿಗೆ ಬೆಳೆ ಹಾನಿ ಪರಿಹಾರ ವಿತರಣೆ, ಸಮರ್ಪಕ ವಿದ್ಯುತ್ ಪೂರೈಕೆ ಮತ್ತು ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.




