ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪಾದಯಾತ್ರೆ: ಪ್ರತಿ ಟನ್ಗೆ 1 ಸಾವಿರ ರೂ. ಪ್ರೋತ್ಸಾಹಧನಕ್ಕೆ ಆಗ್ರಹ
ಬೆಳಗಾವಿ: ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಬ್ಬು ಬೆಳೆಗಾರರು(Sugarcane Farmers) ಈಗ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ರಾಜ್ಯ ಸರ್ಕಾರವೂ (Karnataka Government) ಪ್ರತಿ ಟನ್ ಕಬ್...

ರಾಜ್ಯದಲ್ಲಿ ಕಬ್ಬು ಬೆಳೆಗಾರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚೂನಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಬೆಳಗಾವಿಯಿಂದ ಬೃಹತ್ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ. ಪ್ರತಿ ಟನ್ ಕಬ್ಬಿಗೆ ತಮಿಳುನಾಡು ಮಾದರಿಯಲ್ಲಿ 1,000 ರೂಪಾಯಿ ಪ್ರೋತ್ಸಾಹಧನ ನೀಡಬೇಕು ಮತ್ತು ಸಕ್ಕರೆ ಮೇಲಿನ ಕನಿಷ್ಠ ಬೆಂಬಲ ಬೆಲೆಯನ್ನು 60 ರೂಪಾಯಿಗೆ ಹೆಚ್ಚಿಸಬೇಕು ಎಂಬುದು ರೈತರ ಪ್ರಮುಖ ಒತ್ತಾಯವಾಗಿದೆ. ಸುವರ್ಣ ವಿಧಾನಸೌಧದ ಬಳಿ ಆರಂಭವಾದ ಈ ಹೋರಾಟವು ಮೂರನೇ ದಿನದತ್ತ ಸಾಗುತ್ತಿದ್ದು, ಬೇಡಿಕೆ ಈಡೇರುವವರೆಗೆ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಹುಬ್ಬಳ್ಳಿಯನ್ನು ತಲುಪುವ ವೇಳೆಗೆ ಸರ್ಕಾರಗಳು ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಜನಾಂದೋಲನ ನಡೆಸುವುದಾಗಿ ಸಂಘಟನೆ ಎಚ್ಚರಿಕೆ ನೀಡಿದೆ.




