ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬೆಳಗಾವಿಯಲ್ಲಿ ನಿಷೇಧದ ನಡುವೆಯೂ ಎಂಇಎಸ್ ಪುಂಡಾಟಿಕೆ, ಕರಾಳ ದಿನ ಆಚರಣೆ

ಬೆಳಗಾವಿ: ಇಡೀ ಕರ್ನಾಟಕ ಸಡಗರದಿಂದ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾಡಳಿತ ಹಾಗೂ ನಗರ ಪೊಲೀಸ್ ಇಲಾಖೆಯ ಕಟ್ಟುನಿಟ್ಟಿನ ನಿಷೇಧ ಹಾಗೂ ಅನುಮತಿ ನಿರಾಕರಣೆಯ ನಡುವೆಯೂ ಮಹಾರಾಷ್ಟ್...

· ಬೆಳಗಾವಿ
ನಿಷೇಧದ ನಡುವೆಯೂ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದೇ ಎಂಇಎಸ್ ಕರಾಳ ದಿನ: ನಾಡವಿರೋಧಿ ಘೋಷಣೆ!
ಹಂಚಿಕೊಳ್ಳಿ:

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಪೊಲೀಸ್ ಇಲಾಖೆ ಕರಾಳ ದಿನಾಚರಣೆಗೆ ಅನುಮತಿ ನಿರಾಕರಿಸಿದ್ದರೂ, ಎಂಇಎಸ್ ಕಾರ್ಯಕರ್ತರು ನವೆಂಬರ್ 1 ರಂದು ರ‍್ಯಾಲಿ ನಡೆಸಿದ್ದಾರೆ. ಸಂಭಾಜಿ ಉದ್ಯಾನದಿಂದ ಮರಾಠಾ ಮಂದಿರದವರೆಗೆ ಮೆರವಣಿಗೆ ಸಾಗಿದಾಗ ನಾಡವಿರೋಧಿ ಘೋಷಣೆಗಳನ್ನು ಕೂಗಲಾಯಿತು. ಈ ಕೃತ್ಯದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಿಗಿ ಭದ್ರತೆಯನ್ನು ನಿಯೋಜಿಸಲಾಗಿತ್ತು.

ಹಂಚಿಕೊಳ್ಳಿ: