ಬೆಂಗಳೂರಿಗೆ ಪೋಲೆಂಡ್ ಪ್ರಧಾನಿ ಭೇಟಿ: ಎಐ ಮತ್ತು ಏರೋಸ್ಪೇಸ್ ವಲಯದಲ್ಲಿ ಸಹಕಾರಕ್ಕೆ ಡಿ ಕೆ ಶಿವಕುಮಾರ್ ಆಹ್ವಾನ
ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ), ಏರೋಸ್ಪೇಸ್, ಔಷಧ, ಸಂಶೋಧನೆ ಮತ್ತು ನಾವೀನ್ಯತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪೋಲೆಂಡ್ ಜೊತೆ ವ್ಯಾಪಾರ ಹಾಗೂ ತಂತ್ರಜ್ಞಾನ ಸಂಬಂಧಗಳನ್ನು ಬಲಪಡಿಸಲು ಕರ್ನಾಟಕ ಸಿದ್ಧವಿದೆ ಎ...

ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರು 100 ಉದ್ಯಮಿಗಳ ನಿಯೋಗದೊಂದಿಗೆ ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಮಾಹಿತಿ ತಂತ್ರಜ್ಞಾನವನ್ನು ಮೀರಿ ಕೃತಕ ಬುದ್ಧಿಮತ್ತೆ, ಏರೋಸ್ಪೇಸ್ ಮತ್ತು ಔಷಧೀಯ ಕ್ಷೇತ್ರಗಳಲ್ಲಿ ರಾಜ್ಯದೊಂದಿಗೆ ಕೈಜೋಡಿಸಲು ಪೋಲೆಂಡ್ಗೆ ಅವಕಾಶಗಳಿವೆ ಎಂದು ಶಿವಕುಮಾರ್ ತಿಳಿಸಿದರು. ಜಾಗತಿಕ ಹೂಡಿಕೆದಾರರ ಸಮಾವೇಶಗಳ ಮೂಲಕ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣ ಕಲ್ಪಿಸಲಾಗಿದೆ ಎಂದು ಅವರು ವಿವರಿಸಿದರು. 2030ರ ವೇಳೆಗೆ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಬಾಹ್ಯಾಕಾಶ ಮತ್ತು ವೈಜ್ಞಾನಿಕ ಸಂಶೋಧನೆಗಳಲ್ಲೂ ಸಹಕಾರ ವಿಸ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ಸ್ಪಷ್ಟಪಡಿಸಿದರು.




