ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಎದುರು ರಾಜ್ಯದ ಬೇಡಿಕೆಗಳ ಪಟ್ಟಿ ಮಂಡಿಸಿದ ಡಿ.ಕೆ. ಶಿವಕುಮಾರ್
– ಮೆಟ್ರೋ ಅನುದಾನ, ಬರ ಪರಿಹಾರಕ್ಕೆ ಮನವಿ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಸಮ್ಮುಖದಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜ್ಯದ ಪ್ರಮುಖ ಬೇಡಿಕೆಗಳ ಪಟ್ಟಿಯನ್ನ...

ಬೆಂಗಳೂರಿನ ಐಐಎಂಬಿ ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ. ಮೆಟ್ರೋ ಯೋಜನೆಗೆ ಕೇಂದ್ರದಿಂದ ಸಿಗಬೇಕಾದ ಅನುದಾನ ಮತ್ತು ಹೆಚ್ಚುವರಿ ವೆಚ್ಚದ ಪಾಲುದಾರಿಕೆಯನ್ನು ಸಮಾನವಾಗಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲದಿಂದ 85 ಲಕ್ಷ ಎಕರೆ ಬೆಳೆ ನಷ್ಟವಾಗಿದ್ದು, 62 ಸಾವಿರ ಕೋಟಿ ರೂ. ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದಾರೆ. ಜತೆಗೆ ಕಬ್ಬು ಬೆಳೆಗಾರರ ಸಂಕಷ್ಟವನ್ನು ಗಮನದಲ್ಲಿಟ್ಟುಕೊಂಡು ಎಂಎಸ್‌ಪಿ ಮತ್ತು ಸಕ್ಕರೆ ದರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಪ್ರಧಾನಿಗಳಿಗೆ ಕೋರಿದ್ದಾರೆ.




