ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬೆಂಗಳೂರು: ಬೆನ್ನುನೋವಿನ ಚಿಕಿತ್ಸೆಗಾಗಿ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದು, ಜೈಲಿನಲ್ಲಿಯೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿ ಅವರ ಪರ ವಕೀಲರು...

· ಬೆಂಗಳೂರು ನಗರ
ನಟ ದರ್ಶನ್‌ಗೆ ಮತ್ತೆ ತೀವ್ರ ಬೆನ್ನು ನೋವು: ಫಿಸಿಯೋಥೆರಪಿಗೆ ಅನುಮತಿ ಕೋರಿ ಕೋರ್ಟ್‌ಗೆ ಅರ್ಜಿ!
ಹಂಚಿಕೊಳ್ಳಿ:

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದು, ಜೈಲಿನಲ್ಲಿ ಫಿಸಿಯೋಥೆರಪಿ ಪಡೆಯಲು ಅನುಮತಿ ಕೋರಿ 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎಲ್4 ಹಾಗೂ ಎಲ್5 ಬೆನ್ನುಹುರಿಯ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವುದಾಗಿ ದರ್ಶನ್ ತಿಳಿಸಿದ್ದು, ಈ ಹಿಂದೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದ್ದಾರೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ನವೆಂಬರ್ 2ಕ್ಕೆ ಮುಂದೂಡಿದ್ದಾರೆ. ಅಷ್ಟರವರೆಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆಯನ್ನು ಒದಗಿಸುವಂತೆ ಜೈಲು ಅಧಿಕಾರಿಗಳಿಗೆ ನ್ಯಾಯಾಲಯ ಮೌಖಿಕ ಸೂಚನೆ ನೀಡಿದೆ.

ಹಂಚಿಕೊಳ್ಳಿ: