ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬೆಂಗಳೂರು: ಹಾಲಿನ ದರ ಏರಿಕೆ ಹೊರೆ ಗ್ರಾಹಕರ ಮೇಲೆ ಹಾಕದಂತೆ ಸರ್ಕಾರಕ್ಕೆ ಸುಧಾಕರ್ ಆಗ್ರಹ

ಬೆಂಗಳೂರು: ರೈತರಿಗೆ ಹಾಲಿನ ಖರೀದಿ ದರ ಹೆಚ್ಚಿಸುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ ರೈತರ ಹೆಸರಿನಲ್ಲಿ ಹಾಲಿನ ದರ ಏರಿಕೆ ಮಾಡಿ ಬಡ ಮಕ್ಕಳು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುವುದು ಸರಿಯಲ...

· ಬೆಂಗಳೂರು ನಗರ
ನಿಮಗೆ ರೈತರ ಮೇಲೆ ನಿಜವಾದ ಕಾಳಜಿ ಇದ್ದರೆ....
ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ... ಸಂಸದ ಸುಧಕಾರ್ ಸವಾಲು!
ಹಂಚಿಕೊಳ್ಳಿ:

ರೈತರಿಗೆ ನೀಡುವ ಹಾಲಿನ ಖರೀದಿ ದರವನ್ನು ಹೆಚ್ಚಿಸುವುದಕ್ಕೆ ವಿರೋಧವಿಲ್ಲ, ಆದರೆ ಆ ಆರ್ಥಿಕ ಹೊರೆ ಗ್ರಾಹಕರ ಮೇಲೆ ಬೀಳಬಾರದು ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸರ್ಕಾರವು ತನ್ನ ಬೊಕ್ಕಸದಿಂದಲೇ ಪ್ರತಿ ಲೀಟರ್ ಹಾಲಿಗೆ 10 ರೂಪಾಯಿ ಸಹಾಯಧನ ನೀಡುವ ಮೂಲಕ ರೈತರಿಗೆ ನ್ಯಾಯಯುತ ಬೆಲೆ ಮತ್ತು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಹಾಲು ಒದಗಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ರೈತರ ಹೆಸರಿನಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರ ಮೇಲೆ ಬೆಲೆ ಏರಿಕೆಯ ಭಾರ ಹಾಕುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಚಿಮುಲ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳು ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಈ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಸವಾಲು ಹಾಕಿದ್ದಾರೆ.

ಹಂಚಿಕೊಳ್ಳಿ: