ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬೆಂಗಳೂರು: ಜಿಬಿಎ ಚುನಾವಣೆ ನಡೆಸಲು ಹಳೆಯ ಮತದಾರರ ಪಟ್ಟಿಗೆ ಅನುಮತಿ ಕೋರಿ ಸುಪ್ರೀಂಗೆ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ಎಸ್​ಐಆರ್​ಗೂ ಮೊದಲಿನ ಹಳೆಯ ಮತದಾರರ ಪಟ್ಟಿಯನ್ನೇ ಬಳಸಲು ಅನುಮತಿ ನೀಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ...

· ಬೆಂಗಳೂರು ನಗರ
GBA Polls: ಹಳೆ ಮತದಾರರ ಪಟ್ಟಿಗೆ ರಾಜ್ಯ ಚುನಾವಣಾ ಆಯೋಗ ಒಲವು; ಸುಪ್ರೀಂ ಕೋರ್ಟ್​ಗೆ ಮನವಿ
ಹಂಚಿಕೊಳ್ಳಿ:

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು 2026ರ ಏಪ್ರಿಲ್ 18ರ ಅಂತಿಮ ಮತದಾರರ ಪಟ್ಟಿಯನ್ನು ಬಳಸಲು ಅವಕಾಶ ನೀಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್ ಅನ್ನು ಕೋರಿದೆ. ಕೇಂದ್ರ ಚುನಾವಣಾ ಆಯೋಗದಿಂದ ಪರಿಷ್ಕೃತ ದತ್ತಾಂಶ ಸಿಗದಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಪ್ರಕ್ರಿಯೆ ಪೂರ್ಣಗೊಳಿಸಲು 2027ರ ಜನವರಿ 31ರವರೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಲಾಗಿದೆ. ಅಲ್ಲದೆ ರಾಜ್ಯದ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಾಗಿ 2025ರ ಅಕ್ಟೋಬರ್ 1ರ ಮತದಾರರ ಪಟ್ಟಿಯನ್ನು ಬಳಸಲು ಅನುಮತಿ ನೀಡುವಂತೆ ಆಯೋಗವು ನ್ಯಾಯಾಲಯವನ್ನು ಕೇಳಿಕೊಂಡಿದೆ.

ಹಂಚಿಕೊಳ್ಳಿ: