ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧದ ಮಾನನಷ್ಟ ಪ್ರಕರಣ ರದ್ದು

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ 'ಭ್ರಷ್ಟಾಚಾರದ ದರಪಟ್ಟಿ' ಜಾಹೀರಾತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕ...

· ಬೆಂಗಳೂರು ನಗರ
BJP ದಾಖಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಸಿದ್ದರಾಮಯ್ಯ, ಡಿಕೆಶಿಗೆ ಗೆಲುವು: ವಿಚಾರಣಾ ಪ್ರಕ್ರಿಯೆಯನ್ನೇ ರದ್ದುಗೊಳಿಸಿದ ಹೈಕೋರ್ಟ್..!
ಹಂಚಿಕೊಳ್ಳಿ:

2023ರ ವಿಧಾನಸಭಾ ಚುನಾವಣೆ ವೇಳೆ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ಭ್ರಷ್ಟಾಚಾರದ ದರಪಟ್ಟಿ ಜಾಹೀರಾತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಈ ಆದೇಶ ನೀಡಿದ್ದು, ರಾಜಕೀಯ ಪಕ್ಷಗಳು ಇಂತಹ ಪ್ರಕರಣಗಳಲ್ಲಿ ನೊಂದ ವ್ಯಕ್ತಿಗಳಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಯು ಕಾನೂನುಬದ್ಧವಾಗಿಲ್ಲ ಎಂದು ವಾದಿಸಿದ್ದ ಅರ್ಜಿದಾರರ ಪರ ವಕೀಲರ ಮನವಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಈ ಮೂಲಕ ಕಾಂಗ್ರೆಸ್ ನಾಯಕರ ವಿರುದ್ಧದ ಕಾನೂನು ಸಮರಕ್ಕೆ ಹೈಕೋರ್ಟ್ ತೆರೆ ಎಳೆದಿದೆ.

ಹಂಚಿಕೊಳ್ಳಿ: