ಬೆಂಗಳೂರು: ಯಲಹಂಕದಲ್ಲಿ ಪತ್ನಿಯ ಎದುರೇ ರಿಯಲ್ ಎಸ್ಟೇಟ್ ಉದ್ಯಮಿ ಚರಣ್ ಗೌಡ ಹತ್ಯೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಪತ್ನಿಯ ಕಣ್ಣೆದುರೇ ದುಷ್ಕರ್ಮಿಗಳ ಗ್ಯಾಂಗ್ ಉದ್ಯಮ...

ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಧಣಿ ಪ್ರಾಪರ್ಟೀಸ್ ಮಾಲೀಕ ಚರಣ್ ಗೌಡ ಅವರನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದೆ. ತಮ್ಮ ಕಚೇರಿಗೆ ಪತ್ನಿಯೊಂದಿಗೆ ತೆರಳುತ್ತಿದ್ದಾಗ ಐದರಿಂದ ಆರು ಮಂದಿ ಯುವಕರ ತಂಡ ಈ ಭೀಕರ ಕೃತ್ಯ ನಡೆಸಿದೆ. ತಲೆಗೆ ಗಂಭೀರ ಗಾಯಗಳಾದ ಪರಿಣಾಮ ಚರಣ್ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದು, ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಹಳೆಯ ಭೂ ವ್ಯವಹಾರದ ವಿವಾದವೇ ಈ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಆರೋಪಿಗಳು ಕೃತ್ಯದ ಬಳಿಕ ಪರಾರಿಯಾಗಿದ್ದಾರೆ.




