ಬಿಹಾರ ದೋಣಿ ದುರಂತ: 15 ವರ್ಷದೊಳಗಿನ 13 ಮಕ್ಕಳು ಸಾವು, ₹6 ಲಕ್ಷ ಪರಿಹಾರ ಘೋಷಣೆ
ಹಾಜಿಪುರ: ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಗಂಗಾ ನದಿಯಲ್ಲಿ ದೋಣಿ ಮಗುಚಿ ಬಿದ್ದು ಕನಿಷ್ಠ 13 ಮಂದಿ ಮೃತಪಟ್ಟಿದ್ದಾರೆ.‘ದುರಂತಕ್ಕೀಡಾದ ದೋಣಿಯಲ್ಲಿ ಸುಮಾರು 20 ಮಂದಿ ಪ್ರಯಾಣಿಸುತ್ತಿದ್ದರು. ಮೃತಪಟ್ಟವರ...

ಬಿಹಾರದ ವೈಶಾಲಿ ಜಿಲ್ಲೆಯ ಗಂಗಾ ನದಿಯಲ್ಲಿ ದೋಣಿ ಮಗುಚಿ ಬಿದ್ದ ಪರಿಣಾಮ 13 ಮಕ್ಕಳು ಮೃತಪಟ್ಟಿದ್ದಾರೆ. ರಾಘೋಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ಈ ದುರಂತ ನಡೆದಿದ್ದು, ಏಳು ಮಂದಿಯನ್ನು ರಕ್ಷಿಸಿ ಪಾಟ್ನದ ಎನ್ಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹4 ಲಕ್ಷ ಪರಿಹಾರವನ್ನು ಬಿಹಾರದ ಸಾಮ್ರಾಟ್ ಚೌಧರಿ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50000 ಪರಿಹಾರ ಘೋಷಿಸಿ ಸಂತಾಪ ಸೂಚಿಸಿದ್ದಾರೆ.




