ಬುಲ್ಧಾನ: ರೈತರ ಆತ್ಮಹತ್ಯೆ ಕುರಿತು ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ
ಬುಲ್ಧಾನ: ಆತ್ಮಹತ್ಯೆಗೆ ಶರಣಾಗುವ ರೈತರ ಅಂತ್ಯಕ್ರಿಯೆಯಲ್ಲಿ ಜನರು ಭಾಗವಹಿಸಬಾರದು ಎಂದು ಶಿವಸೇನಾ (ಶಿಂದೆ ಬಣ) ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಬ...

ಬುಲ್ಧಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಶಿವಸೇನಾ ಶಿಂದೆ ಬಣದ ಶಾಸಕ ಸಂಜಯ್ ಗಾಯಕ್ವಾಡ್ ರೈತರ ಆತ್ಮಹತ್ಯೆ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಅಂತ್ಯಕ್ರಿಯೆಯಲ್ಲಿ ಯಾರೂ ಭಾಗವಹಿಸಬಾರದು ಮತ್ತು ಅವರ ಶವಗಳನ್ನು ಪ್ರಾಣಿಗಳು ತಿನ್ನಬೇಕು ಎಂದು ಅವರು ಹೇಳಿದ್ದಾರೆ. ಇಂತಹ ಕಠಿಣ ಕ್ರಮದಿಂದ ಮಾತ್ರ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿಯುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ರೈತರು ತಮ್ಮ ಸಮಸ್ಯೆಗಳನ್ನು ಸರ್ಕಾರ ಅಥವಾ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು ಹೊರತು, ಕುಟುಂಬವನ್ನು ಅನಾಥರನ್ನಾಗಿ ಮಾಡಿ ಪ್ರಾಣ ಕಳೆದುಕೊಳ್ಳಬಾರದು ಎಂದು ಅವರು ಸಲಹೆ ನೀಡಿದ್ದಾರೆ.




