ಮುಖ್ಯ ವಿಷಯಕ್ಕೆ ಹೋಗಿ
The Karnataka Today
17 Oct
ಕರ್ನಾಟಕ

ಚಾಮರಾಜನಗರದಲ್ಲಿ ಕಣ್ಮನ ಸೆಳೆಯುತ್ತಿರುವ ದಸರಾ ಗೊಂಬೆಗಳ ಪ್ರದರ್ಶನ

ಚಾಮರಾಜನಗರ: ಗೊಂಬೆ ಕೂರಿಸುವುದು ದಸರಾ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ನವರಾತ್ರಿ ಸಂದರ್ಭದಲ್ಲಿ ದಸರಾ ಗೊಂಬೆ ಕೂರಿಸುವ ಆಚರಣೆ ಅನೂಚಾನವಾಗಿ ನಡೆದುಕೊಂಡು ಬರುತ್ತಿದೆ. ನೋಡುಗರ ಕಣ್...

· ಚಾಮರಾಜನಗರ
ನೋಡುಗರ ಕಣ್ಮನ ಸೆಳೆಯುತ್ತಿವೆ ಈ ದಸರಾ ಗೊಂಬೆಗಳು
ಹಂಚಿಕೊಳ್ಳಿ:

ಹಳೇ ಮೈಸೂರು ಭಾಗದಲ್ಲಿ ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ನಡೆದುಕೊಂಡು ಬಂದಿರುವ ದಸರಾ ಗೊಂಬೆ ಕೂರಿಸುವ ಸಂಪ್ರದಾಯವನ್ನು ಚಾಮರಾಜನಗರದ ಜನರು ಇಂದಿಗೂ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಪುರಾಣದ ಕಥೆಗಳು, ಐತಿಹಾಸಿಕ ಘಟನೆಗಳು ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ವಿವಿಧ ಬಗೆಯ ಗೊಂಬೆಗಳನ್ನು ಇಲ್ಲಿನ ಮನೆಗಳಲ್ಲಿ ಪ್ರದರ್ಶನಕ್ಕೆ ಇಡಲಾಗಿದೆ. ರಾಮಾಯಣ, ಮಹಾಭಾರತ, ಶ್ರೀನಿವಾಸ ಕಲ್ಯಾಣ ಹಾಗೂ ಜಂಬೂಸವಾರಿಯಂತಹ ದೃಶ್ಯಗಳನ್ನು ಗೊಂಬೆಗಳ ಮೂಲಕ ಸುಂದರವಾಗಿ ಚಿತ್ರಿಸಲಾಗಿದೆ. ಹಳೆಯ ಕಾಲದ ಹಿತ್ತಾಳೆ, ತಾಮ್ರ ಮತ್ತು ಪಿಂಗಾಣಿ ವಸ್ತುಗಳನ್ನು ಬಳಸಿದ ಈ ಪ್ರದರ್ಶನವನ್ನು ನೋಡಲು ಸುತ್ತಮುತ್ತಲಿನ ಪ್ರದೇಶಗಳಿಂದ ಜನರು ಆಗಮಿಸುತ್ತಿದ್ದಾರೆ.

ಹಂಚಿಕೊಳ್ಳಿ: