ಚನ್ನಪಟ್ಟಣದ ಸುಳ್ಳೇರಿಯಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ರಾಮನಗರ: ಚನ್ನಪಟ್ಟಣ (Channapatna) ತಾಲೂಕಿನಲ್ಲಿ ಚಿರತೆ (Leopard) ಹಾವಳಿ ಮುಂದುವರಿದಿದೆ. ತಾಲೂಕಿನ ಸುಳ್ಳೇರಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿ...

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸುಳ್ಳೇರಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಗ್ರಾಮದ ನಿವಾಸಿ ಮುತ್ತುರಾಜು ಅವರ ಮನೆಯ ಬಳಿ ತಡರಾತ್ರಿ ಚಿರತೆ ಓಡಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಇದರಿಂದಾಗಿ ಸ್ಥಳೀಯರಲ್ಲಿ ಆತಂಕ ಮನೆಮಾಡಿದ್ದು, ರಾತ್ರಿ ಸಮಯದಲ್ಲಿ ಮನೆಯಿಂದ ಹೊರಬರಲು ಜನರು ಭಯಪಡುತ್ತಿದ್ದಾರೆ. ವಿಷಯ ತಿಳಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಅನಾಹುತಗಳನ್ನು ತಪ್ಪಿಸಲು ಕೂಡಲೇ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.




