ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಚಿಕ್ಕಬಳ್ಳಾಪುರದ ಸ್ಕಂದಗಿರಿಯಲ್ಲಿ ಟ್ರೆಕ್ಕಿಂಗ್ ವೇಳೆ ಯುವಕನಿಗೆ ಹಾವು ಕಡಿತ

ಚಿಕ್ಕಬಳ್ಳಾಪುರ: ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಪ್ರಸಿದ್ಧ ಸ್ಕಂದಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ವೇಳೆ ಯುವಕನಿಗೆ ವಿಷಕಾರಿ ಹಾವು ಕಚ್ಚಿರುವ ಘಟನೆ ನಡೆದಿದೆ. ಬೆಂಗ...

· ಚಿಕ್ಕಬಳ್ಳಾಪುರ
ಸ್ಕಂದಗಿರಿ ಬೆಟ್ಟದಲ್ಲಿ ಟ್ರೆಕ್ಕಿಂಗ್ ವೇಳೆ ಯುವಕನಿಗೆ ವಿಷಕಾರಿ ಹಾವು ಕಡಿತ
ಹಂಚಿಕೊಳ್ಳಿ:

ಬೆಂಗಳೂರಿನ ಸಹಕಾರನಗರದ ನಿವಾಸಿ 33 ವರ್ಷದ ದೇವೇಂದ್ರ ಅವರು ಚಿಕ್ಕಬಳ್ಳಾಪುರದ ಸ್ಕಂದಗಿರಿ ಬೆಟ್ಟದಲ್ಲಿ ಚಾರಣ ಮಾಡುತ್ತಿದ್ದಾಗ ವಿಷಕಾರಿ ಬ್ಯಾಂಬೂ ಪಿಟ್ ವೈಪರ್ ಹಾವು ಕಚ್ಚಿದೆ. ಗಾಯಗೊಂಡ ಯುವಕನನ್ನು ತಕ್ಷಣವೇ ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಡಿಎಫ್‌ಒ ಗಿರೀಶ್ ಅವರು ಆಸ್ಪತ್ರೆಗೆ ತೆರಳಿ ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ. ಇತ್ತೀಚೆಗಷ್ಟೇ ಮತ್ತೆ ಆರಂಭಗೊಂಡಿದ್ದ ಸ್ಕಂದಗಿರಿ ಟ್ರೆಕ್ಕಿಂಗ್‌ನಲ್ಲಿ ಈ ದುರ್ಘಟನೆ ನಡೆದಿರುವುದು ಪ್ರವಾಸಿಗರ ಸುರಕ್ಷತೆಯ ಬಗ್ಗೆ ಆತಂಕ ಮೂಡಿಸಿದೆ.

ಹಂಚಿಕೊಳ್ಳಿ: