ಚಿಕ್ಕಮಗಳೂರು: ಬಿಂಡಿಗ ದೇವಿರಮ್ಮನ ಬೆಟ್ಟ ಏರುತ್ತಿದ್ದ ಭಕ್ತ ಲಕ್ಷ್ಮಣ್ ಹೃದಯಾಘಾತದಿಂದ ಸಾವು
ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಬಿಂಡಿಗ ದೇವಿರಮ್ಮನ ಬೆಟ್ಟ (Bindiga Deviramma Hill) ಹತ್ತುವಾಗ ಹೃದಯಾಘಾತಕ್ಕೊಳಗಾಗಿ (Heart Attack) ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ...

ಚಿಕ್ಕಮಗಳೂರಿನ ಬಿಂಡಿಗ ದೇವಿರಮ್ಮನ ಬೆಟ್ಟಕ್ಕೆ ಭೇಟಿ ನೀಡಿದ್ದ ಭಕ್ತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ ನಿವಾಸಿಯಾಗಿದ್ದ 32 ವರ್ಷದ ಲಕ್ಷ್ಮಣ್ ಬೆಟ್ಟವನ್ನು ಹತ್ತುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ದೇವಿರಮ್ಮನ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಬಾರಿ ಎರಡು ದಿನಗಳ ಕಾಲ ಬೆಟ್ಟ ಏರಲು ಜಿಲ್ಲಾಡಳಿತ ಅವಕಾಶ ಕಲ್ಪಿಸಿದ್ದು, ಅದರಂತೆ ಭಕ್ತರು ಹಗಲಿನ ಸಮಯದಲ್ಲಿ ಮಾತ್ರ ಬೆಟ್ಟಕ್ಕೆ ತೆರಳುತ್ತಿದ್ದಾರೆ.




