ಚಿಕ್ಕಮಗಳೂರು ಮತ್ತು ತರೀಕೆರೆಯಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಚಿಕ್ಕಮಗಳೂರು: ಕಾಫಿನಾಡಿನ (Chikkamagaluru) ಬಯಲುಸೀಮೆ ಭಾಗಗಳಾದ ಬೆಳವಾಡಿ, ಕಳಸಾಪುರ ಸೇರಿದಂತೆ ಹಲವೆಡೆ ಭಾರೀ (Rain) ಮಳೆಯಾಗುತ್ತಿದೆ. ಇದರಿಂದ ಜನಜೀವನ ಅಸ್ಥವ್ಯಸ್ಥವಾಗಿದೆ. ಚಿಕ್ಕಮಗಳೂರು, ತರೀಕೆರೆ, ಕಡೂರು ಭಾಗ...

ಚಿಕ್ಕಮಗಳೂರು ಜಿಲ್ಲೆಯ ಬೆಳವಾಡಿ ಮತ್ತು ಕಳಸಾಪುರ ಸೇರಿದಂತೆ ಬಯಲುಸೀಮೆ ಪ್ರದೇಶಗಳಲ್ಲಿ ಅಕ್ಟೋಬರ್ 22ರ ರಾತ್ರಿಯಿಂದ ಮಳೆ ಸುರಿಯುತ್ತಿದೆ. ತರೀಕೆರೆ ಪಟ್ಟಣದ ರಸ್ತೆಗಳು ಜಲಾವೃತಗೊಂಡಿದ್ದು, ರಸ್ತೆಯಲ್ಲಿದ್ದ ದ್ವಿಚಕ್ರ ವಾಹನಗಳು ನೀರಿನಲ್ಲಿ ಮುಳುಗಿ ಸವಾರರು ತೊಂದರೆ ಅನುಭವಿಸಿದ್ದಾರೆ. ಅಕ್ಟೋಬರ್ 23ರ ಮಧ್ಯಾಹ್ನ 1 ಗಂಟೆಯಿಂದಲೂ ಮಳೆ ಮುಂದುವರಿದಿದ್ದು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಮಳೆ ಕೊರತೆಯಿಂದ ಕಂಗೆಟ್ಟಿದ್ದ ರೈತರು, ಕಾಫಿ ಮತ್ತು ಅಡಿಕೆ ಬೆಳೆಗಳ ರಕ್ಷಣೆಗಾಗಿ ಹಿಂಗಾರು ಮಳೆಯ ನಿರೀಕ್ಷೆಯಲ್ಲಿದ್ದಾರೆ.




