ಮುಖ್ಯ ವಿಷಯಕ್ಕೆ ಹೋಗಿ
The Karnataka Today
12 Oct
ಸುದ್ದಿ
ಕರ್ನಾಟಕ

ಚಿಂತಾಮಣಿ: 150 ನಾಡಬಾಂಬ್, ಬಂದೂಕು ವಶ, 35 ವರ್ಷದ ವ್ಯಕ್ತಿ ಬಂಧನ

ಚಿಕ್ಕಬಳ್ಳಾಪುರ: ಜಿಲ್ಲೆಯ ​ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು (Country Made Bo...

· ಚಿಕ್ಕಬಳ್ಳಾಪುರ
ಅಕ್ರಮವಾಗಿ ಸಂಗ್ರಹಿಸಿದ್ದ 150 ನಾಡಬಾಂಬ್, ಬಂದೂಕು ವಶ – 35 ವರ್ಷದ ವ್ಯಕ್ತಿಯ ಬಂಧನ
ಹಂಚಿಕೊಳ್ಳಿ:

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ದಾಳಿಯ ವೇಳೆ, ಅಕ್ರಮವಾಗಿ ಇರಿಸಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು (Country Made Bomb) ಹಾಗೂ ಒಂದು ನಾಡಬಂದೂಕನ್ನು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಎಂಬಾತನನ್ನು ಬಟ್ಲಹಳ್ಳಿ ಪೊಲೀಸರು (Baltahalli Police) ವಶಕ್ಕೆ ಪಡೆದಿದ್ದಾರೆ. ನಿಖರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬಟ್ಲಹಳ್ಳಿ ಪೊಲೀಸರು, ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 150 ನಾಡಬಾಂಬ್‌ಗಳು ಮತ್ತು ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯು ಇಷ್ಟೊಂದು ದೊಡ್ಡ ಪ್ರಮಾಣದ ಸ್ಫೋಟಕಗಳು ಮತ್ತು ಬಂದೂಕನ್ನು ಯಾವ ಕಾರಣಕ್ಕಾಗಿ ಹಾಗೂ ಎಲ್ಲಿಂದ ತಂದಿದ್ದ ಎಂಬ ಬಗ್ಗೆ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಪ್ರಕ್ರಿಯೆಯನ್ನು ಕೈಗೊಂಡಿದ್ದಾರೆ.

ಹಂಚಿಕೊಳ್ಳಿ: