ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ಚಿಂತಾಮಣಿ ಬಳಿ ಬಸ್ ಮತ್ತು ಕಾರು ಡಿಕ್ಕಿ: ಓರ್ವ ಚಾಲಕ ಸಾವು, ಐವರಿಗೆ ಗಾಯ

ಚಿಕ್ಕಬಳ್ಳಾಪುರ: ಖಾಸಗಿ ಬಸ್ (Private Bus) ಮತ್ತು ಕಾರಿನ (Car) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಮಗು ಸೇರಿದಂತೆ ಐವರು ಗಾಯಗೊಂಡಿರುವ ಘಟನೆ ಚಿಂತಾಮಣಿ-ಬೆಂಗಳೂರು ರ...

· ಚಿಕ್ಕಬಳ್ಳಾಪುರ
ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ – ಕಾರು ಚಾಲಕ ಸ್ಥಳದಲ್ಲೇ ಸಾವು, ಐವರಿಗೆ ಗಾಯ
ಹಂಚಿಕೊಳ್ಳಿ:

ಚಿಂತಾಮಣಿ-ಬೆಂಗಳೂರು ರಸ್ತೆಯ ಪೆರಮಾಚನಹಳ್ಳಿ ಮತ್ತು ಕೆಂದನಹಳ್ಳಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಅಬ್ದುಲ್ ಇಮ್ರಾನ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಮದನಪಲ್ಲಿಯಿಂದ ಬಂದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬಾಬುಲ್ಲಾ, ಅಕ್ತರ್ ಉನ್ನೀಸಾ, ಗೌಸಿಯಾ, ರಶೀದ್ ಬಾಷಾ ಹಾಗೂ ಮುಜಾಮಿಲ್ ಗಾಯಗೊಂಡಿದ್ದು, ಅವರನ್ನು ಹೆಚ್.ಕ್ರಾಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕನ ಅಜಾಗರೂಕತೆಯೇ ದುರ್ಘಟನೆಗೆ ಕಾರಣವೆಂದು ಆರೋಪಿಸಲಾಗಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹಂಚಿಕೊಳ್ಳಿ: