ಚಿಂತಾಮಣಿ: ಗರುಡ ಮಾರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಕೋಟ್ಯಂತರ ಮೌಲ್ಯದ ವಸ್ತುಗಳು ಭಸ್ಮ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಟಿವಿ, ಫ್ರಿಡ್ಜ್ ಹಾಗೂ ವಾಷಿಂಗ್ ಮಷೀನ್ ಅಸೆಂಬ್ಲಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ (Fire Accident) ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನ...

ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗರುಡ ಮಾರ್ಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಅವಘಡದಿಂದ ಟಿವಿ, ಫ್ರಿಡ್ಜ್ ಮತ್ತು ವಾಷಿಂಗ್ ಮಷೀನ್ಗಳು ಸುಟ್ಟು ಭಸ್ಮವಾಗಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಷ್ಟವಾಗಿದೆ. ಚಿಂತಾಮಣಿ ಹಾಗೂ ಶಿಡ್ಲಘಟ್ಟದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಸ್ಥಳೀಯರು ಮತ್ತು ಯುವಕರು ಸಹಾಯಕ್ಕೆ ಧಾವಿಸಿ ಕಾರ್ಖಾನೆಯಲ್ಲಿದ್ದ ವಾಹನಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಮೂಲಕ ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ.




