ಚಿತ್ರದುರ್ಗದ ಮಲ್ಲಾಪುರದಲ್ಲಿ ಕೆಎಸ್‌ಆರ್‌ಟಿಸಿ ಬಸ್-ಲಾರಿ ಡಿಕ್ಕಿ: ಇಬ್ಬರು ಸಾವು
– 15ಕ್ಕೂ ಹೆಚ್ಚು ಮಂದಿಗೆ ಗಾಯ ಚಿತ್ರದುರ್ಗ: ಲಾರಿಗೆ (Lorry) ಕೆಎಸ್‌ಆರ್‌ಟಿಸಿ ಬಸ್ (KSRTC Bus) ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ (Bus Driver) ಹಾಗೂ ಪ್ರಯಾಣಿಕ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀ...

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬಸ್ ಚಾಲಕ ಬಾಪು ಪಾಟೀಲ್ ಮತ್ತು ಗಗನ್ ಎಂಬ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ 15ಕ್ಕೂ ಹೆಚ್ಚು ಪ್ರಯಾಣಿಕರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಜು ನಾಯ್ಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್ ಸ್ಥಳ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.




