CM ಡಿ.ಕೆ. ಶಿವಕುಮಾರ್‌ಗಾಗಿ ತಡವಾಯ್ತಾ IndiGo flight? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗಾಗಿ ಬೆಂಗಳೂರಿನಿಂದ ದೆಹಲಿಗೆ ಹೊರಡಬೇಕಿದ್ದ ಇಂಡಿಗೋ ವಿಮಾನವನ್ನು ತಡವಾಗಿ ಹೊರಟಿತ್ತು ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಜೋ...

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗಾಗಿ ಬೆಂಗಳೂರಿನಿಂದ ದೆಹಲಿಗೆ ಪ್ರಯಾಣಿಸಬೇಕಿದ್ದ ಇಂಡಿಗೋ ವಿಮಾನವು ವಿಳಂಬವಾಗಿ ಹಾರಾಟ ನಡೆಸಿತು ಎಂಬ ಆರೋಪ ವ್ಯಕ್ತವಾಗಿದ್ದು, ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಮಂಗಳವಾರ ಇಂಡಿಗೋ ವಿಮಾನ 6E 870, ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬರುವ ತನಕ ವಿಮಾನ ನಿಲ್ದಾಣದ ರನ್‌ವೇನಲ್ಲಿ ಸುಮಾರು ಒಂದು ಗಂಟೆ ಕಾಲ ಕಾಯಬೇಕಾಯಿತು ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ. ಆದರೆ, ವಿಮಾನ ತಡವಾದದ್ದಕ್ಕೆ ಕಾರ್ಯಾಚರಣೆಯ ಕಾರಣಗಳೇ ಕಾರಣ ಎಂದು ಇಂಡಿಗೋ ಸ್ಪಷ್ಟನೆ ನೀಡಿದೆ.
ಪ್ರಯಾಣಿಕರಾದ ಸುಪರ್ಣಾ ಸಿಂಗ್ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಬೇಕಿದ್ದ ವಿಮಾನದಲ್ಲಿದ್ದ ಪ್ರಯಾಣಿಕರು ಅನಿವಾರ್ಯವಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಳಂಬದ ಬಗ್ಗೆ ವಿಮಾನಯಾನ ಸಂಸ್ಥೆಯು ಸರಿಯಾದ ಮಾಹಿತಿ ನೀಡಲಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಪೈಲಟ್ ಯಾವುದೇ ಕಾರಣವನ್ನು ಸ್ಪಷ್ಟಪಡಿಸಲಿಲ್ಲ. ಪ್ರಯಾಣಿಕರಾದ ನಾವು ಕಾಯುವುದನ್ನು ಹೊರತುಪಡಿಸಿ ಬೇರೆ ಆಯ್ಕೆ ಹೊಂದಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.
ವಿಮಾನ ಸಂಚಾರ ಟ್ರ್ಯಾಕಿಂಗ್ ವೆಬ್‌ಸೈಟ್‌ನಲ್ಲಿನ ಅಂಕಿಅಂಶಗಳ ಪ್ರಕಾರ, ವಿಮಾನವು ರಾತ್ರಿ 7.30ಕ್ಕೆ ಹೊರಡಬೇಕಿತ್ತು, ಆದರೆ ರಾತ್ರಿ 8.06ಕ್ಕೆ ಅಂದರೆ ನಿಗದಿತ ಸಮಯಕ್ಕಿಂತ ಸುಮಾರು 36 ನಿಮಿಷ ತಡವಾಗಿ ಪ್ರಯಾಣ ಆರಂಭಿಸಿದೆ ಎಂಬುದು ತಿಳಿದುಬಂದಿದೆ.
ಬೆಂಗಳೂರಿನಿಂದ ದೆಹಲಿಗೆ ತೆರಳಬೇಕಿದ್ದ ಇಂಡಿಗೋ 6E870 ವಿಮಾನವು ಮುಖ್ಯಮಂತ್ರಿ ಆಗಮಿಸುವವರೆಗೂ ನಿನ್ನೆ ರಾತ್ರಿ ರನ್‌ವೇನಲ್ಲಿ ಒಂದು ಗಂಟೆ ಕಾಯಬೇಕಾಯಿತು. ಈ ವಿಳಂಬಕ್ಕೆ ಅವರೇ ಕಾರಣ ಎಂದು ಸಿಬ್ಬಂದಿಯೊಬ್ಬರು ಖಚಿತಪಡಿಸಿದ್ದಾರೆ.
ಮಂಗಳವಾರ ಶಿವಕುಮಾರ್ ಅವರು ಇದೇ ವಿಮಾನದಲ್ಲಿ ನವದೆಹಲಿಗೆ ತೆರಳಬೇಕಿತ್ತು ಎಂಬುದು ತಿಳಿದುಬಂದಿದೆ. ಆದರೂ, ವಿಮಾನ ವಿಳಂಬಕ್ಕೆ ಮುಖ್ಯಮಂತ್ರಿಗಳ ಆಗಮನವೇ ಕಾರಣ ಎಂಬ ಆರೋಪವನ್ನು ಇಂಡಿಗೋ ದೃಢಪಡಿಸಿಲ್ಲ. ವಿಮಾನವು ಕಾರ್ಯಾಚರಣೆಗೆ ಸಂಬಂಧಿಸಿದ ಕಾರಣಗಳಿಂದ ತಡವಾಗಿದೆ ಎಂದು ಏರ್‌ಲೈನ್ಸ್ ತಿಳಿಸಿದೆ.




