ದಾವಣಗೆರೆ: ಪತಿಯ ಹತ್ಯೆಗೈದ ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಪತಿಯನ್ನೇ (Husband) ಹತ್ಯೆಗೈದಿದ್ದ ಪತ್ನಿಗೆ (Wife) ದಾವಣಗೆರೆಯ (Davanagere) 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (Court) ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ....

ಚನ್ನಗಿರಿ ತಾಲೂಕಿನ ಚಿಕ್ಕಕೋಗಲೂರು ಗ್ರಾಮದ ರೇಖಾ ಎಂಬಾಕೆಯು ತನ್ನ ಪತಿ ಶಾಂತಕುಮಾರನನ್ನು ಹತ್ಯೆಗೈದ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾಗಿದೆ. 2023ರ ಮಾರ್ಚ್ 21ರ ರಾತ್ರಿ ನಿದ್ರೆಯಲ್ಲಿದ್ದ ಪತಿಯ ತಲೆಗೆ ಕೊಡಲಿಯಿಂದ ಹಲ್ಲೆ ನಡೆಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದ ಶಾಂತಕುಮಾರ್, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 25ರಂದು ಮೃತಪಟ್ಟಿದ್ದನು. ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣದ ತನಿಖೆಯನ್ನು ಲಿಂಗನಗೌಡ ನೆಗಳೂರು ನಡೆಸಿದ್ದರು. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ದಾವಣಗೆರೆಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣಮೂರ್ತಿ ಆರ್. ಪಡಸಲಗಿ ಅವರು ರೇಖಾಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.




