ಮುಖ್ಯ ವಿಷಯಕ್ಕೆ ಹೋಗಿ
ಸುದ್ದಿ

ಮಾಧ್ಯಮ ಲೋಕದಲ್ಲಿ ನಿಮ್ಮ ಧ್ವನಿಗೆ ಸುವರ್ಣಾವಕಾಶ!

ಸುದ್ದಿ, ವಿಶ್ಲೇಷಣೆ, ಲೇಖನಗಳು ನಿಮ್ಮದು – ಪ್ರಕಟಣೆಯ ಹೊಣೆ ನಮ್ಮದು!

ದಿ ಕರ್ನಾಟಕ ಟುಡೇ ನ್ಯೂಸ್ · ಜನರ ಧ್ವನಿ, ಸಮಾಜದ ಪ್ರತಿಬಿಂಬ

ಬರೆಯಿರಿ →
ಕರ್ನಾಟಕ

ದಾವಣಗೆರೆಯಲ್ಲಿ ವಿಧಾನಪರಿಷತ್ ಚುನಾವಣೆ ಸರ್ಕಾರದ ವೈಫಲ್ಯಕ್ಕೆ ದಿಕ್ಸೂಚಿ: ಬಿ.ಎಸ್. ಯಡಿಯೂರಪ್ಪ

ದಾವಣಗೆರೆ: ಭ್ರಷ್ಟಾಚಾರ, ದುರಾಡಳಿತ ಮತ್ತು ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ. ವಿಧಾನಪರಿಷತ್ತಿಗೆ ನಡೆಯುತ್ತಿರುವ ಈ ಚುನಾವಣೆಯು ಜನಾಕ್ರೋಶದ ದಿಕ್ಸೂಚಿ...

· ದಾವಣಗೆರೆ
ಜನಾಕ್ರೋಶದ ದಿಕ್ಸೂಚಿ ಆಗಲಿದೆ ಚುನಾವಣೆ: ಬಿ.ಎಸ್. ಯಡಿಯೂರಪ್ಪ
ಹಂಚಿಕೊಳ್ಳಿ:

ದಾವಣಗೆರೆಯ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ನಡೆದ ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಪರ ಪ್ರಚಾರ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಅವರು ಟೀಕಿಸಿದರು. ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣಗಳನ್ನು ಪ್ರಸ್ತಾಪಿಸಿದ ಅವರು, ವಿಧಾನಪರಿಷತ್ ಚುನಾವಣೆ ಸರ್ಕಾರದ ವಿರುದ್ಧದ ಜನಾಕ್ರೋಶಕ್ಕೆ ಸಾಕ್ಷಿಯಾಗಲಿದೆ ಎಂದರು. ಈ ಸಭೆಗೆ ಜಿ.ಎಂ. ಸಿದ್ದೇಶ್ವರ ಹಾಗೂ ಬಿ.ಪಿ. ಹರೀಶ್ ಗೈರು ಹಾಜರಾಗಿದ್ದು ವಿಶೇಷವಾಗಿತ್ತು.

ಹಂಚಿಕೊಳ್ಳಿ: